Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RSS 100ನೇ ವರ್ಷಾಚರಣೆ ಪ್ರಯುಕ್ತ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗಿ | Salman Khan

08/02/2026 12:10 PM

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

08/02/2026 12:04 PM

ಸಾರ್ವಜನಿಕರೇ ಗಮನಿಸಿ : ಗಾಜು, ತಾಮ್ರ, ಉಕ್ಕು, ಪ್ಲಾಸ್ಟಿಕ್… ಯಾವ `ಬಾಟಲ್’ ನಲ್ಲಿ ನೀರು ಕುಡಿಯುವುದು ಸುರಕ್ಷಿತ ಗೊತ್ತಾ?

08/02/2026 11:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By kannadanewsnow5702/06/2024 12:09 PM

ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.

ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು 2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ: 30/06/2024.ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸದರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ತಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವ ಸ್ಥಳೀಯ ದಿನ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ನೀಡಿ, ಜಾಹಿರಾತು ನೀಡಿರುವ ಬಗ್ಗೆ ಪತ್ರಿಕಾ ವರದಿಯನ್ನು ಕೇಂದ್ರ ಕಛೇರಿಗೆ ತಪ್ಪದೇ ಸಲ್ಲಿಸತಕ್ಕದ್ದು.

ಷರತು/ನಿಯಮಗಳು;

1) ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.

2) ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ: 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

3) ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

4) ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ

ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

5) ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

6) ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000-00 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

ಈ ಮೇಲ್ಕಂಡ ಎಲ್ಲ ಅಂಶಗಳನ್ನೊಳಗೊಂಡಂತೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದೆ.

000 Applications invited for incentives Good news for school students in the state: Rs 10 ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ ಎರಡು ದಿನ ಮೊಟ್ಟೆ
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

08/02/2026 12:04 PM1 Min Read

ಸಾರ್ವಜನಿಕರೇ ಗಮನಿಸಿ : ಗಾಜು, ತಾಮ್ರ, ಉಕ್ಕು, ಪ್ಲಾಸ್ಟಿಕ್… ಯಾವ `ಬಾಟಲ್’ ನಲ್ಲಿ ನೀರು ಕುಡಿಯುವುದು ಸುರಕ್ಷಿತ ಗೊತ್ತಾ?

08/02/2026 11:57 AM2 Mins Read

ALERT : ಹಣ ಪಾವತಿಗಾಗಿ `QR’ ಕೋಡ್‌ ಸ್ಕ್ಯಾನ್ ಮಾಡುವವರು ತಪ್ಪದೇ ಓದಲೇಬೇಕಾದ ಸುದ್ದಿ.!

08/02/2026 11:50 AM3 Mins Read
Recent News

RSS 100ನೇ ವರ್ಷಾಚರಣೆ ಪ್ರಯುಕ್ತ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗಿ | Salman Khan

08/02/2026 12:10 PM

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

08/02/2026 12:04 PM

ಸಾರ್ವಜನಿಕರೇ ಗಮನಿಸಿ : ಗಾಜು, ತಾಮ್ರ, ಉಕ್ಕು, ಪ್ಲಾಸ್ಟಿಕ್… ಯಾವ `ಬಾಟಲ್’ ನಲ್ಲಿ ನೀರು ಕುಡಿಯುವುದು ಸುರಕ್ಷಿತ ಗೊತ್ತಾ?

08/02/2026 11:57 AM

ಭಾರತಕ್ಕೆ 114 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಮುಹೂರ್ತ ಫಿಕ್ಸ್: ಚೀನಾ-ಪಾಕ್‌ಗೆ ನಡುಕ!

08/02/2026 11:55 AM
State News
KARNATAKA

SHOCKING : ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

By kannadanewsnow5708/02/2026 12:04 PM KARNATAKA 1 Min Read

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ…

ಸಾರ್ವಜನಿಕರೇ ಗಮನಿಸಿ : ಗಾಜು, ತಾಮ್ರ, ಉಕ್ಕು, ಪ್ಲಾಸ್ಟಿಕ್… ಯಾವ `ಬಾಟಲ್’ ನಲ್ಲಿ ನೀರು ಕುಡಿಯುವುದು ಸುರಕ್ಷಿತ ಗೊತ್ತಾ?

08/02/2026 11:57 AM

ALERT : ಹಣ ಪಾವತಿಗಾಗಿ `QR’ ಕೋಡ್‌ ಸ್ಕ್ಯಾನ್ ಮಾಡುವವರು ತಪ್ಪದೇ ಓದಲೇಬೇಕಾದ ಸುದ್ದಿ.!

08/02/2026 11:50 AM

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.