ಪ್ರಸಕ್ತ(2025-26) ಸಾಲಿನ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸೆಪ್ಟೆಂಬರ್, 11 ಮತ್ತು 12 ರಂದು ಬೆಳಗ್ಗೆ 10 ಗಂಟೆಗೆ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಬ್ಲಾಕ್ ಮತ್ತು ಜಿಲ್ಲಾ ಹಂತದ ಗಣಕೀಕೃತ ಕೌನ್ಸೆಲಿಂಗ್ ನಗರದ ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರು(ಆಡಳಿತ) ಇಲ್ಲಿ ನಡೆಯಲಿದೆ.
ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸೆಲಿಂಗ್ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಕೋರಿದ್ದಾರೆ.