ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ 2024-25 ನೇ ಸಾಲಿನ ವರ್ಗಾವನೇಗೆ ಅಧಿಸೂಚನೆ ಪ್ರಕಟವಾಗಿದ್ದು, ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಿಸಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಲ್ಲಿನಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಹಮ್ಮಿಕೊಳ್ಳಲಾಗಿದೆ.
2020ರಲ್ಲಿ ಜಾರಿಯಾದ ಶಿಕ್ಷಕರ ವರ್ಗಾವಣೆ ಕಾಯ್ದೆಯಂತೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹಂಚಿಕೆ ಮತ್ತು ಕಡ್ಡಾಯ ವಲಯ ವರ್ಗಾವಣೆಗಳನ್ನು ಒಂದರ ನಂತರ ಒಂದನ್ನು ಪರ್ಯಾಯ ವರ್ಷಗಳಲ್ಲಿ ಹಮ್ಮಿಕೊಳ್ಳಬೇಕಾಗಿರುತ್ತದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು వాగణ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಶೈಕ್ಷಣಿಕ ವರ್ಷದ ಆರಂಭದ ಮುಂಚೆ ಕಾಯ್ದೆಯಂತೆ ನಿರ್ವಹಿಸಬೇಕಿದೆ.
ಹಾಗೆಯೇ, ಮೇಲ್ಕಂಡಂತೆ ಪ್ರಸಕ್ತ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ವಲಯ ವರ್ಗಾವಣೆ ಕೈಗೊಳ್ಳಬೇಕಾಗಿದ್ದು ವಲಯ ವರ್ಗಾವಣೆ ಪ್ರಕ್ರಿಯೆಯ ಸಹಿತವಾಗಿ ಶಿಕ್ಷಕರ ಸಾಮಾನ್ಯ ವರ್ಗಾವಣಾ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲು ಮಾರ್ಗಸೂಚಿಗಳನ್ನು ಮತ್ತು ವೇಳಾಪಟ್ಟಿಯನ್ನು ಹೊರಡಿಸಲಾಗಿದೆ. ಈ ಸಂಬಂಧ ವರ್ಗಾವಣೆಗೆ ಪೂರಕವಾದ ಇ.ಇ.ಡಿ.ಎಸ್ ದತ್ತಾಂಶ, ಖಾಲಿ ಹುದ್ದೆಗಳ ಮಾಹಿತಿ, ಶಾಲಾ ವಲಯಗಳ ದತ್ತಾಂಶ ಇತ್ಯಾದಿಗಳ ಇಂಡೀಕರಣವಾಗಬೇಕಾಗಿದೆ.
ಎಲ್ಲಾ ಸಾಮಾನ್ಯ/ಪರಸ್ಪರ ವರ್ಗಾವಣೆಗಳನ್ನು On Line ಮೂಲಕವೇ ನಿರ್ವಹಿಸಬೇಕಾಗಿದ್ದು ಶಿಕ್ಷಕರ (Weighted score) ಅಂಕಗಳ ಪ್ರಕಟ, ಆಕ್ಷೇಪಣೆ ಸಲ್ಲಿಕೆ, ವರ್ಗಾವಣಾ ಅರ್ಜಿ ಸಲ್ಲಿಸುವುದು, ಅರ್ಜಿಗಳ/ ಆದ್ಯತೆಗಳ ಪರಿಶೀಲನೆ, ಅರ್ಜಿಗಳ/ ಆದ್ಯತೆಗಳ ಅನುಮೋದನೆ/ ತಿರಸ್ಕಾರ, ಕರಡು ಅರ್ಹ/ ಅನರ್ಹ(ಕಾರಣ ಸಹಿತ) ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸಲ್ಲಿಕೆ, ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ, ಆದ್ಯತಾ ಪಟ್ಟಿ ಅನುಸಾರ ವರ್ಗಾವಣಾ ಕೌನ್ಸೆಲಿಂಗ್ ಪ್ರಕ್ರಿಯೆಗಳು ಇಲಾಖೆಯ ನಿಗದಿತ ತಂತ್ರಾಂಶದಲ್ಲಿಯೇ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.
ವರ್ಗಾವಣೆ ಪ್ರಕ್ರಿಯೆಗಳಿಗೆ ಸಂಬಂಧಪಟ್ಟಂತೆ ಪ್ರಸ್ತುತ ಮಾರ್ಗಸೂಚಿ ಮತ್ತು ವೇಳಾಪಟ್ಟಿಯಲ್ಲಿನ ನಮೂದು ಮತ್ತು ಉಲ್ಲೇಖಗಳು ವರ್ಗಾವಣೆ ಕಾಯ್ದೆ ಮತ್ತು ನಿಯಮಗಳಲ್ಲಿನ ಎಲ್ಲಾ ವ್ಯಾಖ್ಯೆಯಂತೆಯೇ ಇರುತ್ತವೆ. ವರ್ಗಾವಣಾ ಕಾಯ್ದೆ ಮತ್ತು ನಿಯಮಗಳಲ್ಲಿನ ವ್ಯಾಖ್ಯಾನ ಪರಿಭಾಷೆಯನ್ನು ಮತ್ತು ಅರ್ಥ ವ್ಯಾಪ್ತಿಯನ್ನೇ ಅವು ಹೊಂದಿದ್ದು ಪ್ರತ್ಯೇಕವಾದ ಅರ್ಥ ವಿವರಣೆ ಮತ್ತು ವ್ಯಾಪ್ತಿಯನ್ನು ಹೊಂದಿರುವುದಿಲ್ಲ. ಮಾರ್ಗಸೂಚಿ ಅಂಶಗಳು ಕೇವಲ ವರ್ಗಾವಣೆಗಳ ಆಡಳಿತ ನಿರ್ವಹಣೆಗಾಗಿ ಮತ್ತು ಶಿಕ್ಷಕರ ಆಕರ ಸೂಚನೆಗಾಗಿ ಮಾತ್ರ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಿದೆ.
ಪದ ಅಧಿನಿಯಮ ಮತ್ತು ನಿಯಮಗಳನ್ನು ಎಲ್ಲಾ ಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆ/ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ/ನಿಯಮಗಳು-2022ರ ಪ್ರಕಾರ ಕ್ರಮವಹಿಸಲು ಸಕ್ಷಮ ಪ್ರಾಧಿಕಾರಿಗಳಿಗೆ ಸೂಚಿಸಿದೆ.
ಈ ಅಧಿಸೂಚನೆಯು, ತಾಂತ್ರಿಕ/ ಆಡಳಿತಾತ್ಮಕ ಕಾರಣಗಳಿಂದಾಗಿ ವ್ಯತ್ಯಯಗಳುಂಟಾದಲ್ಲಿ ಅವಶ್ಯಕತೆಗೆ ಅನುಗುಣವಾಗಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟಿರುತ್ತದೆ. ಈ ಸಂಬಂಧ ವರ್ಗಾವಣಾ ಪ್ರಕ್ರಿಯೆಯನ್ನು ನಿರ್ವಹಿಸುವ ಸಲುವಾಗಿ ಮಾರ್ಗಸೂಚಿಯ ಅಂಶಗಳನ್ನು ಅನುಬಂಧ-1 ರಲ್ಲಿ ಮತ್ತು ಅನುಬಂಧ- 2ರಲ್ಲಿ ವರ್ಗಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ.