ಬೆಂಗಳೂರು : ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಬೈವೋಲೈನ್ ರೇಷ್ಮೆ ಗೂಡುಗಳಿಗೆ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 10 ರಿಂದ ₹30 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ರೇಷ್ಮೆ ಕೃಷಿ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆ ಚಟುವಟಿಕೆಗಳಲ್ಲಿ ಪ್ರತಿ ವರ್ಷ ಅಂದಾಜು 15.34 ಲಕ್ಷ ಜನರಿಗೆ ಉದ್ಯೋಗ ಭಾಗ್ಯ ಸಿಕ್ಕಿದೆ. ₹200 ಕೋಟಿ ವೆಚ್ಚದಲ್ಲಿ ಶಿಡ್ಲಘಟ್ಟದಲ್ಲಿ ಎರಡು ಹಂತದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ.
ಕ್ಯಾಲನೂರು, ಚಿಂತಾಮಣಿ ಮತ್ತು ರೇಷ್ಮೆ ಗೂಡು ಮಾರುಕಟ್ಟೆಗಳಲ್ಲಿ ಇ – ಹರಾಜು ಪದ್ಧತಿ ಅಳವಡಿಕೆ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ವಾರ್ಷಿಕ ₹6 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಬೈವೋಲೈನ್ ರೇಷ್ಮೆ ಗೂಡುಗಳಿಗೆ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 10 ರಿಂದ ₹30 ಕ್ಕೆ ಹೆಚ್ಚಳ ಮಾಡಲಾಗಿದೆ.