ಬೆಂಗಳೂರು: ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಸಿಹಿಸುದ್ದಿ ಎನ್ನುವಂತೆ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ.
ಈ ಬಗ್ಗೆ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿರುವಂತ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು, ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು ಎಂದಿದ್ದಾರೆ.
ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು. ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ.… pic.twitter.com/Hw84pw5dwN
— DIPR Karnataka (@KarnatakaVarthe) March 6, 2025
ಮಾ.9ರಂದು ಕೊಪ್ಪಳದಲ್ಲಿ ‘KUWJ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭ: ‘ಪತ್ರಕರ್ತ’ರದ್ದೇ ಕಾರುಬಾರು
‘EPFO ಖಾತೆದಾರ’ರಿಗೆ ಮಹತ್ವದ ಮಾಹಿತಿ: ಈ ಬದಲಾವಣೆಗಳಿಗೆ ‘ಕಂಪನಿ ಅನುಮತಿ’ ಅಗತ್ಯವಿಲ್ಲ