ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗೆ ಎರಡನೇ ಹಂತದಲ್ಲಿ 38 ಸಾವಿರ ಮನೆ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಹಂಚಿಕೆಗೆ ಸಿದ್ಧತೆ ನಡೆಸಲಾಗಿದೆ.

ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅತೀಕ್ ಅವರೊಂದಿಗೆ ನಡೆಸಿದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎರಡನೇ ಹಂತದ ಮನೆ ಹಂಚಿಕೆ ಮಾಡಲು ಅಗತ್ಯ ವಾದ 860 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ದೊರೆತಿದೆ. ಈಗಾಗಲೇ ಮನೆಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣ ಹಂತಕ್ಕೆ ಬಂದಿದ್ದು, ಮೂಲ ಸೌಕರ್ಯ ಕಾಮಗಾರಿ ಆದಷ್ಟು ಶೀಘ್ರ ಮುಗಿಸಿ ಮನೆಗಳ ಹಂಚಿಕೆಗೆ ದಿನಾಂಕ ನಿಗದಿ ಪಡಿಸಲು ತೀರ್ಮಾನ ಮಾಡಲಾಯಿತು ಎಂದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,80,253 ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ 36,789 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ 38 ಸಾವಿರ ಮನೆ ಮುಖ್ಯಮಂತ್ರಿ ಯವರಿಂದಲೇ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಸತಿ ಯೋಜನೆಗೆ ಆಯ್ಕೆ ಯಾಗಿದ್ದ ಬಡ ಕುಟುಂಬಗಳು ಫಲಾನುಭವಿಗಳ ವಂತಿಗೆ ಪಾವತಿ ಮಾಡಲು ಸಾಧ್ಯ ವಾಗದೆ ಬ್ಯಾಂಕ್ ಗಳಿಂದಲೂ ಸಾಲ ಸಿಗದೆ ಸಂಕಷ್ಟ ಎದುರಿಸುತ್ತಿದ್ದಾಗ ಮುಖ್ಯಮಂತ್ರಿ ಯವರು ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸುವ ದಿಟ್ಟ ತೀರ್ಮಾನ ಕೈಗೊಂಡು ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದರು. ಅದರಂತೆ ಹಂತ ಹಂತ ವಾಗಿ ಹಣಕಾಸು ಇಲಾಖೆ ಅಗತ್ಯ ಹಣ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇ ಗೌಡ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹಮಂಡಳಿ ಆಯುಕ್ತರಾದ ಕವಿತಾ ಮಣ್ಣಿಕೇರಿ, ಪ್ರಧಾನ ಅಭಿಯಂತರ ರವಿಕುಮಾರ್,ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ್, ಪ್ರಧಾನ ಅಭಿಯಂತರ ಬಾಲರಾಜು, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಸುಶೀಲಮ್ಮ ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ‘HIV’ ಸೊಂಕಿತನ ಮೇಲೆ ‘ಸಲಿಂಗಕಾಮಿ’ಯಿಂದ ಅತ್ಯಾಚಾರ : ಮನೆಯಲ್ಲಿದ್ದ ನಗದು ದೋಚಿ ಪರಾರಿ

ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಆಗಲೇಬೇಕು, ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆ

Share.
Exit mobile version