Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊಬೈಲ್‌ ಗಳಲ್ಲಿ ಏಕಕಾಲಕ್ಕೆ ಇದ್ದಕ್ಕಿದ್ದಂತೆ ಮೊಳಗಿದ `ಸೈರನ್’ ಸದ್ದು | WATCH VIDEO

02/05/2026 12:22 PM

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM

BREAKING : TMC ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಿನ್ನಡೆ : ಕೊಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್!

02/05/2026 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೊಳೆಗೇರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಡಿಸೆಂಬರ್ 2024ರ ಅಂತ್ಯದೊಳಗೆ ಸಿಗಲಿದೆ ಮನೆ
KARNATAKA

ಕೊಳೆಗೇರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಡಿಸೆಂಬರ್ 2024ರ ಅಂತ್ಯದೊಳಗೆ ಸಿಗಲಿದೆ ಮನೆ

By kannadanewsnow0720/06/2024 5:44 PM
vidhana soudha
vidhana soudha

ಬೆಂಗಳೂರು: ಕೊಳೆಗೇರಿ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಫಲಾನುಭವಿಗಳಿಗೆ 2024ನೇ ಡಿಸೆಂಬರ್ ಅಂತ್ಯದೊಳಗಾಗಿ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸಲು ಎಲ್ಲಾ ಅಧಿಕಾರಿಗಳಿಗೆ ಹುಬ್ಬಳ್ಳಿ-ಧಾರವಾಡ (ಪೂರ್ವ)ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಸೂಚಿಸಿದ್ದಾರೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುμÁ್ಠನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಇದೇ ಜೂನ್ 18 ರಂದು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳು ಮಾಲೀಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ಪರಿಶೀಲಿಸಿದರು.

ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈವರೆವಿಗೂ 68,415 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆಯು ಮಂದಗತಿಯಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಾಜರಿದ್ದ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರವು ನಿಗಧಿಪಡಿಸಿರುವ ಕಾಲಾಮಿತಿಯೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಕೂಡಲೇ ಕ್ರಮವಹಿಸಲು ಸೂಚಿಸಿದರು. ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿಯಮಗಳನ್ವಯ ಶಿಸ್ತಿನ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಮಂಡಳಿ ವತಿಯಿಂದ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಆವಾಸ್ (ಸರ್ವರಿಗೂ ಸೂರು) ಯೋಜನೆಯಡಿ 1,80,253 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಕೈಗೆತ್ತಿಕೊಂಡು ಅನುμÁ್ಠನಗೊಳಿಸಲಾಗುತ್ತಿದ್ದು, ಈ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಪರಿಶೀಲಿಸಿದರು. ಇದರ ಪೈಕಿ ಈಗಾಗಲೇ ಪೂರ್ಣಗೊಂಡಿರುವ 36,789 ಮನೆಗಳನ್ನು ಸನ್ಮಾನ್ಯ ಮುಖ್ಯಮುಂತ್ರಿಯವರ ಅಮೃತ ಹಸ್ತದಿಂದ 2024 ನೇ ಮಾರ್ಚ್ 2 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರೇಶ್ವರ ನಾಗೇನಹಳ್ಳಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ತಿಳಿಸಿದರು.

ಜುಲೈ 2024ರ ಅಂತ್ಯದೊಳಗೆ 34,744 ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಮುಂಬರುವ ದಿವಸಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ಈ ಮನೆಗಳನ್ನು ಮುಖ್ಯಮಂತ್ರಿಯವರ ಅಮೃತ ಹಸ್ತದಿಂದ ಲೋಕರ್ಪಾಣೆ ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದರು. ಆದ್ದರಿಂದ ಸದರಿ ಕಾಮಗಾರಿಗಳನ್ನು ಅತ್ಯಂತ ತ್ವರಿತವಾಗಿ ಚುರುಕುಗೊಳಿಸಲು ವಿಭಾಗ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿಗಳನ್ನು ಟೆಂಡರ್ ಕರಾರಿನಂತೆ ನಿಗಧಿತ ಅವಧಿಯೊಳಗೆ ನಿರ್ವಹಿಸುವಲ್ಲಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ನಿಯಮಗಳನ್ವಯ ನೋಟೀಸ್ ಜಾರಿ ಮಾಡಲು ಹಾಗೂ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗುವ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‍ಗೆ ಸೇರ್ಪಡೆಗೊಳಿಸುವ ಬಗ್ಗೆ ಕ್ರಮವಹಿಸಲು ತಿಳಿಸಿದರು. ಇನ್ನು ಮುಂದೆ ಯಾವುದೇ ರೀತಿಯಲ್ಲಿ ವಿಳಂಬ ಮಾಡದೇ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ತಿಳಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು 1975ನೇ ಸಾಲಿನಲ್ಲಿ ಸ್ಥಾಪನೆಯಾಗಿ ಸುಮಾರು 50 ವರ್ಷಗಳು ಕಳೆದಿದ್ದು, ಮಂಡಳಿಯಿಂದ ಅನುμÁ್ಠನಗೊಳ್ಳುತ್ತಿರುವ ವಸತಿ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮವನ್ನು ಕೊಳಗೇರಿ ನಿವಾಸಿಗಳಿಗೆ ಪಾರದರ್ಶಕವಾಗಿ ತಲುಪಿಸುವ ನಿಟ್ಟಿನಲ್ಲಿ ಮಂಡಳಿಯ ಎಲ್ಲಾ ಕಾರ್ಯಚಟುವಟಿಕೆಗಳನ್ನು ಗಣಕೀಕರಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಆಯುಕ್ತರಾದ ಡಾ. ಅಶೋಕ್.ಡಿ.ಆರ್. ಮುಖ್ಯ ಇಂಜಿನಿಯರಾದ ಎನ್.ಪಿ.ಬಾಲರಾಜು ಮತ್ತು ತಾಂತ್ರಿಕ ನಿರ್ದೇಶಕರನ್ನೊಳಗೊಂಡಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Good news for slums: Houses to be provided by December 2024-end ಕೊಳೆಗೇರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಡಿಸೆಂಬರ್ 2024ರ ಅಂತ್ಯದೊಳಗೆ ಸಿಗಲಿದೆ ಮನೆ
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM1 Min Read

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM1 Min Read

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM2 Mins Read
Recent News

BREAKING : ಮೊಬೈಲ್‌ ಗಳಲ್ಲಿ ಏಕಕಾಲಕ್ಕೆ ಇದ್ದಕ್ಕಿದ್ದಂತೆ ಮೊಳಗಿದ `ಸೈರನ್’ ಸದ್ದು | WATCH VIDEO

02/05/2026 12:22 PM

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

02/05/2026 12:20 PM

BREAKING : TMC ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಹಿನ್ನಡೆ : ಕೊಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್!

02/05/2026 12:15 PM

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM
State News
KARNATAKA

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

By kannadanewsnow0502/05/2026 12:20 PM KARNATAKA 1 Min Read

ಮಂಡ್ಯ : ಮಂಡ್ಯದಲ್ಲಿ ಅನುಮಾನಾಸ್ಪದವಾಗಿ ಗ್ರಹಿಣಿ ಸಾವನ್ನಪ್ಪಿದ್ದಾರೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಂಡ್ಯ ತಾಲೂಕಿನ…

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

02/05/2026 12:03 PM

ಏನಿದು ‘ಸಿಲಿಕಾನ್ ಕಾರ್ಬನ್’ ಬ್ಯಾಟರಿ? ಫೋನ್‌ಗಳು ಇಷ್ಟೊಂದು ಸ್ಲಿಮ್ ಆಗಲು ಇದೇ ಕಾರಣ!

02/05/2026 12:03 PM

ALERT : `ಹೇರ್ ಡೈ’ ಮಾಡಿಸುವ ಮಹಿಳೆಯರೇ ಎಚ್ಚರ : ತಪ್ಪದೇ ಇದನ್ನು ತಿಳಿದುಕೊಳ್ಳಲೇಬೇಕು.!

02/05/2026 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.