ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2024 ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ಪಾಸುಗಳನ್ನು ಫೆಬ್ರುವರಿ 28 ರ ವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ ವಿಶೇಷಚೇತನರು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ https://sevasinduservices.karnataka.gov.in ನಲ್ಲಿ ಸಲ್ಲಿಸುವುದು.
ಅರ್ಜಿ ಸಲ್ಲಿಸುವಾಗ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್ಪೋರ್ಟ್ ಅಳತೆಯ ಪೋಟೋ ಹಾಗೂ ಯುಡಿಐಡಿ/ ಗುರುತಿನ ಚೀಟಿಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕಿದೆ. ಪಾಸುಗಳನ್ನು ಆಯಾಯ ತಾಲ್ಲೂಕಿನ ಘಟಕದಲ್ಲಿ ನವೀಕರಿಸಿ ಪಡೆಯಬಹುದಾಗಿದೆ.
ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಚೇರಿ ಪುತ್ತೂರಿನಲ್ಲಿ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್ಪೋರ್ಟ್ ಅಳತೆಯ 02 ಪೋಟೋ, ಅಂಚೆ ಚೀಟಿ ಗಾತ್ರದ ಹಾಗೂ ಯು.ಡಿ.ಐ.ಡಿ/ ಗುರುತಿನ ಚೀಟಿಯ ಪ್ರತಿ ಮತ್ತು ಯು.ಡಿ.ಐ.ಡಿ/ ಗುರುತಿನ ಚೀಟಿಯ ಮೂಲ ಪ್ರತಿಯನ್ನು ಮಾನ್ಯತ ಅವಧಿಯನ್ನು ಪರಿಶೀಲನೆ ಮಾಡುವ ಸಲುವಾಗಿ ಪರಿಶೀಲನೆಗಾಗಿ ತೋರಿಸತಕ್ಕದ್ದು ಹಾಗೂ ರೂ.660 ಪಾವತಿ ಮಾಡಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. 08272-295829 ರಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.