ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ.
ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ . ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ ಹಾಗೂ ಪರೀಕ್ಷಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಮತ್ತು ಮೇಲ್ವಿಚಾರಕ ಸಿಬ್ಬಂದಿಗಳಿಗೆ ಈ ಕಳಕಂಡ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.
1. ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ 1167-ಸರ್ಕಾರಿ ಮತ್ತು 884- ಅನುದಾನಿತ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಸ್ವೀಕರಿಸಲು ಅಪೇಕ್ಷಿಸಿರುವ ಹಾಗೂ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಸೂಚಿಸಿದೆ.
2. ಪರೀಕ್ಷಾ ಕೇಂದ್ರಗಳಿರುವ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಅಡುಗೆ ತಯಾರಿಕೆ ಮತ್ತು ಬಡಿಸುವ ನಿರ್ವಹಣೆಗೆ ಅಡುಗೆ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರಾಗಿ ವಿಷಯ ಬೋಧಕರಲ್ಲದ ಶಿಕ್ಷಕರಾದ ದೈಹಿಕ ಶಿಕ್ಷಣ ಶಿಕ್ಷಕರು, ವೃತ್ತಿ ಶಿಕ್ಷಕರು ಇದ್ದಲ್ಲಿ ಒಬ್ಬರನ್ನು ನಿಯೋಜಿಸಿ ಯಾವುದೇ ಆರೋಪಗಳಿಗೆ ಅವಕಾಶ ನೀಡದಂತೆ ವಿರ್ವಹಿಸಲು ಸೂಚಿಸಿದೆ.
3. ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿಯೂ ಸಹ 1-10ನೇ ತರಗತಿಯವರೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೇ ಪೂರೈಸುವುದು.
4. ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದರೊಂದಿಗೆ,ಸುರಕ್ಷಿತವಾಗಿ ಶುಚಿ-ರುಚಿಯಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವುದು ಹಾಗೂ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ, ಬಿಸಿಯೂಟ ಆಹಾರದ ಉತ್ತಮ ಗುಣಮಟ್ಟ, ಸ್ವಚ್ಛತೆ ಮತ್ತು ನೈರ್ಮಲ್ಯ ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಪಥಮ ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವುದು.
ಮೇಲ್ಕಂಡಂತೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಹಂತದ ಇಲಾಖೆಯ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಹಾಗೂ ಪಿ ಎಂ ಪೋಷಣ್ ಅಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.
ಮಧ್ಯಪ್ರದೇಶ : ವಿವಾದಿತ ‘ಭೋಜಶಾಲ-ಕಮಲ್ ಮೌಲಾ’ ಮಸೀದಿ ಸಂಕೀರ್ಣದಲ್ಲಿ ಪುರಾತತ್ವ ಇಲಾಖೆಯಿಂದ ಸಮೀಕ್ಷೆ
ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ