ಬೆಂಗಳೂರು: 2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.
2025-26 ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 28.02.2026 ರಿಂದ 17.03.2026 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ.
- ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 28.02.2026 ರಿಂದ 17.03.2026 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
- ಪಿ.ಯು.ಸಿ ಪರೀಕ್ಷೆ-1 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
- ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
- ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








