ಬೆಂಗಳೂರು: ಕೋವಿಡ್19 ( Covid19 ) ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಿಂದ ( Karnataka SSLC, PUC Exam ) ವಿನಾಯ್ತಿ ನೀಡಲಾಗಿತ್ತು. ಪರೀಕ್ಷೆಯಿಲ್ಲದೇ ಈ ಹಿಂದಿನ ಪರೀಕ್ಷೆಯ ಅಂಕಗಳ ಮಾನದಂಡದಲ್ಲಿ ಪಾಸ್ ಮಾಡಲಾಗಿತ್ತು. ಇಂತಹ ವಿದ್ಯಾರ್ಥಿಗಳಿಗೂ ( Students ) ಪ್ರೋತ್ಸಾಹ ಧನ ನೀಡೋದಕ್ಕೆ ಸರ್ಕಾರ ಆದೇಶಿಸಿದೆ.
ಶಿವಮೊಗ್ಗ: ಶಿಕಾರಿಪುರ ತಾಲೂಕು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ( Social Welfare Department ) ಸರ್ಕಾರದ ಉಪ ಕಾರ್ಯದರ್ಶಿ ಹೊರಡಿಸಿರುವಂತ ತಿದ್ದುಪಡಿ ಆದೇಶದ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಆ ಆದೇಶದಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಕೋವಿಡ್19ರ ಸಂದರ್ಭದ ಅವಧಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪರೀಕ್ಷೆ ಬರೆಯದೇ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಪ್ರೋತ್ಸಾಹಧವನ್ನು ನೀಡೋದಕ್ಕೆ ಸೂಚಿಸಲಾಗಿದೆ.
ಇನ್ನೂ ಮೆಟ್ರಿಕ್ ನಂತ್ರದ ಕೋರ್ಸ್ ಗಳಲ್ಲಿ ವಾರ್ಷಿಕ ಪರೀಕ್ಷೆ ಬರೆದು, ಪ್ರಥಮ ದರ್ಜೆ, ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದಿನಾಂಕ 10-08-2015ರನ್ವಯ ಶೇ.100ರಷ್ಟು ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಆದೇಶಿಸಿದ್ದಾರೆ. ಈ ಮೂಲಕ ಕೋವಿಡ್ ಸಂದರ್ಭದಲ್ಲಿ ಪರೀಕ್ಷೆಯಿಲ್ಲದೇ ಪಾಸ್ ಆದಂತ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.