ಧಾರವಾಡ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov,in ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್‍ಸೈಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS: ‘BJP 8 ಶಾಸಕ’ರು ‘ಕಾಂಗ್ರೆಸ್ ಪಕ್ಷ’ಕ್ಕೆ ಸೇರ್ಪಡೆ: ಶಾಸಕ ಎಸ್.ಟಿ.ಸೋಮಶೇಖರ್ ಸ್ಪೋಟಕ ಹೇಳಿಕೆ
ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ