ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಅಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರು/ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಲು ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ.
ಅದರಂತೆ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ದುಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಒದಗಿಸಲು ಅಗತ್ಯ ಶ್ರಮವಹಿಸಲು ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..









