ಸುಭಾಷಿತ :

Tuesday, April 7 , 2020 6:27 AM

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರದಲ್ಲೇ ಹೊರಬೀಳಲಿದೆ ಸಾಂದರ್ಭಿಕ ರಜೆ ಕುರಿತ ಆದೇಶ


Monday, February 24th, 2020 6:11 am

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾಲ್ಕನೆ ಶನಿವಾರದ ರಜೆ ಅನ್ವಯವಾಗದ ಸರ್ಕಾರಿ ನೌಕರರಿಗೆ 15 ಸಾಂದರ್ಬಿಕ ರಜೆ ಮಂಜೂರು ಕುರಿತು ಇನ್ನೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿ.ಎಸ್. ಷಡಕ್ಷರಿ, ರಾಜ್ಯ ಸರ್ಕಾರ ಈ ಹಿಂದೆ ಸರ್ಕಾರಿ ನೌಕರರಿಗೆ ನಾಲ್ಕನೆಯ ಶನಿವಾರವನ್ನು ಸಾರ್ವತ್ರಿಕ ರಜೆ ಎಂದು ಘೋಷಿಸಿದ ಬಳಿಕ ಸಾಂದರ್ಭಿಕ ರಜೆಗಳನ್ನು 15 ರಿಂದ10 ದಿನಕ್ಕೆ ಕಡಿತಗೊಳಿಸಲಾಗಿತ್ತು. ಹೀಗಾಗಿ ನಾಲ್ಕನೇ ಶನಿವಾರದ ರಜೆ ಅನ್ವಯವಾಗದ ಶಿಕ್ಷಣ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಕೆಲ ಇಲಾಖೆಗಳ ನೌಕರರಿಗೆ ತೊಂದರೆಯಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನಾಲ್ಕನೇ ಶನಿವಾರದ ರಜೆ ಅನ್ವಯವಾಗದ ನೌಕರರ ಸಾಂದರ್ಭಿಕ ರಜೆಯನ್ನು ಹಿಂದಿನಂತೆ15 ದಿನಕ್ಕ ವಿಸ್ತರಿಸಲು ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಸಿಎಂ ಇನ್ನೆರಡು ದಿನಗಳಲ್ಲಿ ಸಾಂದರ್ಭಿಕ ರಜೆ ಕುರಿತ ಆದೇಶ ಅಧಿಕೃತವಾಗಿ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions