ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ವೇತನ ಆಯೋಗದ ವರದಿಯನ್ನು ಜಾರಿ ಮಾಡಲು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಏಳನೇ ವೇತನ ಆಯೋಗದ ವರದಿಯಲ್ಲಿ ಶಿಫಾರಸ್ಸುಗಳನ್ನು ಜಾರಿ ಮಾಡುವುದಕ್ಕೆ ಒಪ್ಪಿಗೆ ನೀಡಿದ್ದು, ಇದನ್ನು ಅಂತಿಮವಾಗಿ ಸಿಎಂ ತೀರ್ಮಾಣ ತೆಗೆದುಕೊಳ್ಳುವುದಕ್ಕೆ ಸಚಿವರು ಒಪ್ಪಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆಯೋಗದ ಶಿಫಾರಸ್ಸಿನಂತೆ ಕೆಲವು ಸಚಿವರು ಶೇಕಡ ವೇತನ ಹೆಚ್ಚಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ವೇತನ ಹೆಚ್ಚಳದ ಬಗ್ಗೆ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಅಂತ ತಿಳಿದು ಬಂಧಿದೆ.