ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ.
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ( Cancellation of NPS ) ಬಗ್ಗೆ ಚರ್ಚಿಸಿದರು.
ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.
ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1
BREAKING: ಕರವೇ ರಾಜ್ಯಾಧ್ಯಕ್ಷ ‘ಟಿ.ಎ ನಾರಾಯಣಗೌಡ’ಗೆ ಜಾಮೀನು ಮಂಜೂರು