ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಬಡ್ತಿ ಸೇರಿದಂತೆ ವಿವಿಧ ಬಡ್ತಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( CLT) ಪಾಸ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಪಾಸ್ ಮಾಡೋದಕ್ಕೆ ನಿಗದಿ ಪಡಿಸಿದ್ದಂತ ಡೆಡ್ ಲೈನ್ ಅನ್ನು ರಾಜ್ಯ ಸರ್ಕಾರ ಡಿ.31, 2024ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ನಿಯಮ 2ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ಮುಂದೆ ಸದರಿ ನಿಯಮಗಳಎಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದಿದ್ದಾರೆ.
ನಿಯಮ 3ಕ್ಕೆ ತಿದ್ದುಪಡಿಯನ್ನು ಮಾಡಲಾಗಿದೆ. ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024 ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿವೆ ಎಂದು ಭಾಪಿಸಿ ಪ್ರತಿಸ್ಥಾಪಿಸತಕ್ಕದ್ದು.
ಉಪ ನಿಯಮ (2)ರಲ್ಲಿ ದಿನಾಂಕ 31-12-2023ರೊಳಗೆ ಎಂಬ ಪದ ಮತ್ತು ಅಂಕಿಗಳ ಬದಲಿಗೆ ದಿನಾಂಕ 31-12-2024ರೊಳಗೆ ಎಂಬ ಪದ ಮತ್ತು ಅಂಕಿಗಳ್ನು ದಿನಾಂಕ 01-01-2024ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂದು ತಿಳಿಸಿದ್ದಾರೆ.
ಬಿಜೆಪಿಗೆ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ – ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ
‘ಹಳೆಯ ತಂತ್ರ, ಎಂದಿಗೂ ರಹಸ್ಯವಲ್ಲ’: ಬಿಜೆಪಿ ಸಂಸದರ ‘ಸಂವಿಧಾನ ಬದಲಾವಣೆ’ ಹೇಳಿಕೆಗೆ ಚಿದಂಬರಂ ತಿರುಗೇಟು