ಬೆಂಗಳೂರು: ರಾಜ್ಯ ಸರ್ಕಾರದಿಂದ 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಈ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, 2024 ಮತ್ತು 2025ನೇ ಸಾಲಿನ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ನಾಮನಿರ್ದೇಶನವನ್ನು ಆನ್ ಲೈನ್ ನಲ್ಲಿ ಸಲ್ಲಿಸುವಂತೆ ಸುತ್ತೋಲೆ ಹೊರಿಸಲಾಗಿತ್ತು ಎಂದಿದ್ದಾರೆ.
ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನವನ್ನು ಸಲ್ಲಿಸುವ ಅವಧಿಯನ್ನು ದಿನಾಂಕ 14-04-2025ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೇ ಇನ್ನೂ ಹೆಚ್ಚಿನ ಸಂಖ್ಯೆಯ ಅಧಿಕಾರಿ, ನೌಕರರು ನಾಮನಿರ್ದೇಶನಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ, ಸದರಿ ಅವಧಿಯನ್ನು ದಿನಾಂಕ 31-05-2025ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರಿ ನೌಕರರೇ ಯಾವುದೇ ಕಾರಣಕ್ಕೂ ಮತ್ತೆ ಕಾಲಾವಧಿಯನ್ನು ವಿಸ್ತರಿಸಲಾಗುವುದಿಲ್ಲ. ದಿನಾಂಕ 31-05-2025ರ ಒಳಗಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.