ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸರ್ಕಾರವು ತುಟ್ಟಿಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಅನುಮೋದಿಸಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ನೌಕರರಿಗೆ ದಿನಾಂಕ 01-07-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮೋದಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಧನ್ಯವಾದಗಳು. ಮುಂದಿನ ಎರಡು, ಮೂರು ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳದ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.