ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರಯೋಚಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಆವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿರುವುದಾಗಿ ತಿಳಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 30.06.2025ರವರೆಗೆ ವಿಸ್ತರಿಸಿ ಆದೇಶಿಸಿದೆ.
SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು
ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ