ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಸರ್ಕಾರಿ ನೌಕರರಿಗೆ ( Karnataka Government Employees ) 7ನೇ ರಾಜ್ಯ ವೇತನ ಆಯೋಗ ( 7th State Pay Commission ) ಜಾರಿಯ ಘೋಷಣೆ ಮಾಡಲಾಗಿತ್ತು. ಇದೀಗ ಈ ಆಯೋಗಕ್ಕೆ ಹುದ್ದೆಗಳನ್ನು ಸೃಜಿಸಿ ಆದೇಶಿಸಲಾಗಿದೆ.
BREAKING NEWS: ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: 3ನೇ ಆರೋಪಿ ಬಸವಾದಿತ್ಯಗೆ ಮಧ್ಯಂತರ ಜಾಮೀನು ಮಂಜೂರು
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ 19-11-2022ರ ಸರ್ಕಾರಿ ಆದೇಶದಲ್ಲಿ ರಚಿಸಿರುವ 7ನೇ ರಾಜ್ಯ ವೇತನ ಆಯೋಗಕ್ಕೆ 44 ಹುದ್ದೆಗಳನ್ನು ಸೃಜಿಸಲು ಸರ್ಕಾರವು ಮಂಜೂರಾತಿ ನೀಡಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೇ 7ನೇ ರಾಜ್ಯ ವೇತನ ಆಯೋಗಕ್ಕೆ ಸೃಜಿಸಿರುವಂತ ಈ ಹುದ್ದೆಗಳಿಂಗ ವೇತನ ಆಯೋಗವು ಶೀಘ್ರದಲ್ಲಿ ಕಾರ್ಯಾರಂಭ ಮಾಡುವುದಕ್ಕೆ ಅನುಕೂಲವಾಗುವಂತೆ ಮಂಜೂರು ಮಾಡಲಾಗಿದೆ ಎಂದಿದೆ.
Vastu Tips for Wealth: ನೀವು ಸಹ ಈ ಮಾರ್ಗಗಳನ್ನು ಅನುಸರಿಸಿ ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳಿ!
ಇನ್ನೂ 7ನೇ ರಾಜ್ಯ ವೇತನ ಆಯೋಗಕ್ಕೆ ಸೃಜಿಸಲಾದ ಈ ಹುದ್ದೆಗಳನ್ನು ಆಯೋಗದ ಅವಧಿಯವರೆಗೆ ತಾತ್ಕಾಲಿಕವಾಗಿ ಸೃಜನೆ ಮಾಡಲಾಗಿರುತ್ತದೆ. ಸೃಜಿಸಲಾದ ಹುದ್ದೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕರ್ನಾಟಕ ಸರ್ಕಾರದ ಸಚಿವಾಲಯದ ಸೇವೆಯಿಂದ ಅಥವಾ ಸರ್ಕಾರದ ಇನ್ನಿತರೆ ಇಲಾಖೆಗಳಿಂದ ನಿಯೋಜನೆ ಮೇಲೆ ಭರ್ತಿ ಮಾಡಿಕೊಳ್ಳಲು ತಿಳಿಸಲಾಗಿದೆ.