ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯು ಸರ್ಕಾರಿ ನೌಕರರಿಗೆ 2018ರಿಂದ 2020ರ ಅವಧಿಯವರೆಗೆ ಬಾಕಿ ಇದ್ದಂತ 2 ವರ್ಷಗಳ ಕೆಜಿಐಡಿ ಬೋನಸ್ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿತು.
ಇಂದಿನ ಸಚಿವ ಸಂಪುಟ ನಿರ್ಣಯದಂತೆ ರಾಜ್ಯ ಸರ್ಕಾರಿ ನೌಕರರಿಗೆ ಕೆಜಿಡಿಐ ಬೋನಸ್ ನೀಡಲು ಶೀಘ್ರದಲ್ಲೇ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಲಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಗಲಿದೆ.
ಇನ್ನೂ 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್