ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ವೇತನ ಪರಿಷ್ಕರಣೆ ಸಂಬಂಧ ಶೀಘ್ರವೇ ವೇತನ ಆಯೋಗ ರಚನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಭರವಸೆ ನೀಡಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ಅವರು, ನೌಕರರ ವೇತನ ಪರಿಷ್ಕರಣೆಗಾಗಿ ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇಂದಿನ ಇಡಿ ವಿಚಾರಣೆಗೆ ‘ಡಿ.ಕೆ ಶಿವಕುಮಾರ್’ ಗೈರು, ‘ಸಂಸದ ಡಿ.ಕೆ ಸುರೇಶ್’ ಹಾಜರ್ | DK Brothers
ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಅವರು ಸಂಘದ ಮನವಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಸಿಎಂ ಅವರಿಗೆ ಅ.10ರಂದು ಅವರ ನಿವಾಸದಲ್ಲಿ ಸಂಘದಿಂದ ಅಂಭಿನಂದಿಸಲಾಗುತ್ತದೆ ಎಂದು ಹೇಳಿದ್ದಾರೆ.