ಬೆಂಗಳೂರು: ನಗರದಲ್ಲಿ ಆಗಸ್ಟ್.17ರಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವಂತ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗಿಯಾಗೋದಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್.17ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ದಿನಾಂಕ:17.08.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನ, ಹಾಗೂ “ಕಾರ್ಯಾಗಾರ” ಆಯೋಜಿಸಲಾಗಿದೆ ಎಂದಿದ್ದಾರೆ.
ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ವರದು ಒದಗಿಸಬೇಕು ಎಂದು ಹೇಳಿದ್ದಾರೆ.
ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರಿ-ನೌಕರರು, ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಇತರೆ ಸ್ಥಳೀಯ/ಸ್ವಾಯತ್ತ ಸಂಸ್ಥೆಗಳ ಅಧಿಕಾರಿ-ನೌಕರರೂ ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು. ಎಂಬ ಪರತಿಗೊಳವನ್ನು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರ ಜಿಲ್ಲೆಗಳ ಅಧಿಕಾರಿ/ನೌಕ ದಿನಾಂಕ: 17.08.2024 ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.
ಇದಲ್ಲದೇ ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ/616/ವೆಚ್-12/2024 ದಿನಾಂಕ: 12.08.2024 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ ಅಂತ ಹೇಳಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಎಂಬ್ರಾಯ್ಡರಿ, ಫ್ಯಾಬ್ರಿಕ್ ಪೈಂಟಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ
ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ