ಬೆಂಗಳೂರು : 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 27 ರಂದು ಒಂದು ದಿನದ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಮರು/ಆಡಳಿತ ಮಂಡಳಿಯು ಖಾತರಿ ಪಡಿಸುವುದು..
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಪದವಿಪೂರ್ವ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡುವುದು. ಮುಂದುವರೆದು, ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದರಿ ಪರೀಕ್ಷೆಯನ್ನು ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದು.
ಅಂತೆಯೇ, ಮೇಲೆ ತಿಳಿಸಿರುವ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ, ಶಾಲಾ ಕಾಲೇಜುಗಳ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸೇವಾ ನಿರತ ಅಭ್ಯರ್ಥಿಗಳು ಅವರುಗಳ ಪರೀಕ್ಷಾ ಪ್ರವೇಶ ಪತ್ರವನ್ನು ರಜಾ ಮಂಜೂರು ಮಾಡುವ ಸಂಬಂಧಿತ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಒದಗಿಸುವ ಷರತ್ತಿಗೊಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು (ದಿನಾಂಕ: 27.08.2024 ರಂದು) ನೀಡಲು ಆದೇಶಿಸಿದೆ.