ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಾಳೆಯ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ದಿನಾಂಕ: 19.03.2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಿಳಾ ಸರ್ಕಾರಿ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದ್ದಾರೆ.

ಈ ಸೌಲಭ್ಯವನ್ನು ಪಡೆಯಲು ರಜೆಯನ್ನು ಮಂಜೂರು ಮಾಡುವ ಸಕ್ಷಮ ಅಧಿಕಾರಿಯಿಂದ ಮುಂಚಿತವಾಗಿ ರಜೆಯನ್ನು ಪಡೆಯತಕ್ಕದ್ದು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿರುವ ಕುರಿತು ನೌಕರರ ಸಂಘದಿಂದ ಪಡೆದ ಅಧಿಕೃತ ಹಾಜರಾತಿ ಪುಮಾಣ ಪತ್ರವನ್ನು ಸಲ್ಲಿಸತಕ್ಕದ್ದೆಂದು ಷರತ್ತನ್ನು ವಿಧಿಸಿ, ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ/65/ಸೇ-3/2024, ದಿನಾಂಕ: 16.03.2024 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ತಾಯಂದಿರು, ಸಹೋದರಿಯರಿಗಾಗಿ ಜೀವನವನ್ನೇ ತ್ಯಾಗ ಮಾಡುತ್ತೇನೆ: ರಾಹುಲ್ ಗಾಂಧಿ ‘ಶಕ್ತಿ’ ಹೇಳಿಕೆಗೆ ಮೋದಿ ತಿರುಗೇಟು

BREAKING: ಆರಂಭದಲ್ಲೇ ಷೇರು ಪೇಟೆ ಸೆನ್ಸೆಕ್ಸ್ 152 , ನಿಫ್ಟಿ 22,000 ಅಂಕ ಕುಸಿತ!

Share.
Exit mobile version