Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

FASTag ನಿಂದ ಬ್ಯಾಂಕ್ ವರ್ಗಾವಣೆವರೆಗೆ: ಇಂದಿನಿಂದ ಬದಲಾದ 5 ಪ್ರಮುಖ ನಿಯಮಗಳು!

01/02/2026 10:36 AM

BREAKING : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ಆರಂಭ

01/02/2026 10:31 AM

ಬಜೆಟ್ ಸಂಭ್ರಮದ ನಡುವೆ ಚಿನ್ನದ ಪ್ರಿಯರಿಗೆ ಗುಡ್ ನ್ಯೂಸ್: ಬರೋಬ್ಬರಿ ಶೇ. 6ರಷ್ಟು ಕುಸಿದ ಬಂಗಾರ, ಬೆಳ್ಳಿ ಬೆಲೆ!

01/02/2026 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ‘7ನೇ ವೇತನ ಆಯೋಗ ವರದಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ‘7ನೇ ವೇತನ ಆಯೋಗ ವರದಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

By kannadanewsnow5713/06/2024 5:49 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.

ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್‌ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಕೆಯಾದ ದಿನದಿಂದಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು. ಹಾಗಾಗಿ, ವೇತನ ಪರಿಷ್ಕರಣೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ ಎನ್ನಲಾಗಿದೆ.

Good news for state government employees: State govt gears up to implement 7th Pay Commission report ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ Good news for state government employees: 7th Pay Commission report to be submitted to CM Siddaramaiah tomorrow
Share. Facebook Twitter LinkedIn WhatsApp Email

Related Posts

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

01/02/2026 10:20 AM3 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM1 Min Read

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM1 Min Read
Recent News

FASTag ನಿಂದ ಬ್ಯಾಂಕ್ ವರ್ಗಾವಣೆವರೆಗೆ: ಇಂದಿನಿಂದ ಬದಲಾದ 5 ಪ್ರಮುಖ ನಿಯಮಗಳು!

01/02/2026 10:36 AM

BREAKING : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ಆರಂಭ

01/02/2026 10:31 AM

ಬಜೆಟ್ ಸಂಭ್ರಮದ ನಡುವೆ ಚಿನ್ನದ ಪ್ರಿಯರಿಗೆ ಗುಡ್ ನ್ಯೂಸ್: ಬರೋಬ್ಬರಿ ಶೇ. 6ರಷ್ಟು ಕುಸಿದ ಬಂಗಾರ, ಬೆಳ್ಳಿ ಬೆಲೆ!

01/02/2026 10:31 AM

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

01/02/2026 10:20 AM
State News
KARNATAKA

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆ ಯತ್ನ: ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಕಾರ

By kannadanewsnow0901/02/2026 10:20 AM KARNATAKA 3 Mins Read

ಬೆಂಗಳೂರು: ಸಿವಿಲ್ ಮೊಕದ್ದಮೆಗಳು ಬಾಕಿ ಇದ್ದ ಮಾತ್ರಕ್ಕೆ ಗಂಭೀರ ಮತ್ತು ಸಂಜ್ಞೇಯ (ಕಾಗ್ನೈಜಬಲ್) ಅಪರಾಧಗಳ ತನಿಖೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು, ವ್ಯಕ್ತಿ ಆತ್ಮಹತ್ಯೆ!

01/02/2026 10:00 AM

ALERT : `ಫರ್ಫೂಮ್’ ಬಳಸುವವರೇ ಎಚ್ಚರ : ಈ ತಪ್ಪು ಮಾಡಿದ್ರೆ ಗಂಭೀರ ಸೋಂಕು ಬರಬಹುದು.!

01/02/2026 9:54 AM

BREAKING : 400 ಕೋಟಿ ರೂ. ರಾಬರಿ ಕೇಸ್ : ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅರೆಸ್ಟ್, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

01/02/2026 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.