Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ಅರ್ಜಿ ವಿಲೇವಾರಿಗೆ ವೇಗ.!
KARNATAKA

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ಅರ್ಜಿ ವಿಲೇವಾರಿಗೆ ವೇಗ.!

By kannadanewsnow57

ಬೆಂಗಳೂರು : ರಾಜ್ಯದಾದ್ಯಂತ ಇ-ಸ್ವತ್ತು 2.0 ತಂತ್ರಾಂಶದಡಿ ಸ್ವೀಕರಿಸುತ್ತಿರುವ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಇಲ್ಲಿಯವರೆಗೂ ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ. ಹೊಸ ನಮೂನೆ 11ಬಿ ಅಡಿ ಈವರೆಗೆ 82,640 ಅರ್ಜಿಗಳು ಸ್ವೀಕೃತವಾಗಿದ್ದು, ವಿವಿಧ ಹಂತಗಳಲ್ಲಿ ಈ ಅರ್ಜಿಗಳು ಅನುಮೋದನೆಗೆ ಬಾಕಿ ಉಳಿದಿವೆ. ಸದರಿ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭಗಳಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

➮ ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ- ಈವರೆಗೆ 2,238 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 998 ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ.

➮ ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

➮ ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್ ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರಗಳನ್ನು (Encumbrance Certificate – EC) ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸೇವ್ (Save) ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಇ-ಖಾತಾಗಳನ್ನು ಡೌನ್ಲೋಡ್ (download) ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

➮ ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್‌ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಹೊರದೇಶದ ಅರ್ಜಿದಾರುಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ ಪಾಸ್‌ಪೋರ್ಟ್ (Passport) ಮೂಲಕ ಅರ್ಜಿಗಳನ್ನು ಸಲ್ಲಿಸಲು ಹಾಗೂ ಹೊಸ ಬದಲಾವಣೆಯಲ್ಲಿ ಇ-ಸ್ವತ್ತು ತಂತ್ರಾಂಶದ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸಲು ಮುಂದಿನ 10 ದಿನದೊಳಗೆ ಅವಕಾಶ ಕಲ್ಪಿಸಲಾಗುವುದು ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆದಾರರ ಲಾಗಿನ್‌ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು.

ಬಹುಮುಖ್ಯವಾಗಿ ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಇ-ಸ್ವತ್ತು ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Good news for state property owners: Speeding up the disposal of e-property applications!
Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

2 Mins Read

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

2 Mins Read

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

1 Min Read
Recent News

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | UG-CET Result 2026

State News
KARNATAKA

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

By kannadanewsnow57 KARNATAKA 2 Mins Read

ಬೆಂಗಳೂರು: ಸಾವಿರಾರು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UGCET/K-CET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ…

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

BIG NEWS : ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜೆವಾಲಾ ಮನವಿ ಮಾಡಿದ್ದಾರೆ : ರಾಮಲಿಂಗಾರೆಡ್ಡಿ ಹೇಳಿಕೆ

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | UG-CET Result 2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.