ಬೆಳಗಾವಿ: ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಈ ಬೆನ್ನಲ್ಲೇ ನೇಕಾರರಿಗೆ ಮತ್ತೊಂದು ಶುಭಸುದ್ದಿಯನ್ನು ನೀಡಿದ್ದಾರೆ. ಅದೇ ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಘೋಷಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಬಗ್ಗೆ ಅಧಿಕೃತವಾಗಿ ನಾಳೆ ಆದೇಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದರು. ಈ ಮೂಲಕ ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ.