ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಮಹಿಳೆಯರನ್ನು ಗುಂಪು ಚಟುವಟಿಕೆಗಳ ಮೂಲಕ ಆರ್ಥಿಕವಾಗಿ ಸಬಲರನ್ನಾಗಿಸಲು ಕಿರುಸಾಲ ಯೋಜನೆಯಡಿ ರೂ. 20.00 ಲಕ್ಷಗಳ ಬಡ್ಡಿರಹಿತ ಸಾಲ ನೀಡಲು ಉದ್ದೇಶಿಸಿದ್ದು, ಅರ್ಹ ಗುಂಪುಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಗುಂಪುಗಳು ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ. 30ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಅಭಿವೃದ್ಧಿ ನಿಗಮ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ, ದೂ.ಸಂ.: 08182-295514 ನ್ನು ಸಂಪರ್ಕಿಸುವುದು.