ಚನ್ನಗಿರಿ: ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಮಕ್ಕಳಿಗೆ ನೀತಿ ವಿಜ್ಞಾನ ಕಲಿಕೆ ಅಗತ್ಯವಿದೆ. ಒಂದರಿಂದ 10ನೇ ತರಗತಿಯವರೆಗೆ ನೀತಿ ವಿಜ್ಞಾನ ಕಲಿಸುವ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ತರಲಾಗುವುದು. ವಾರಕ್ಕೆ ಎರಡು ದಿನ ಈ ವಿಷಯ ಕಲಿಸಲಿದ್ದು, ಎರಡು ದಿನ ಶಿಕ್ಷಣ, ಎರಡು ದಿನ ಕಲಿಕೆಯ ವಿಷಯ ತರಗತಿಗಳು ಇರಲಿವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ಎಂದರು. ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.