Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರ್ಗಿಯಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ 2 ಗುಂಪುಗಳ ಮಧ್ಯ ಗಲಾಟೆ : ಓರ್ವ ಮಹಿಳೆಗೆ ಗಾಯ!

07/02/2026 11:08 AM

ಬಾಂಗ್ಲಾದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ, 50 ಕ್ಕೂ ಹೆಚ್ಚು ಮಂದಿಗೆ ಗಾಯ

07/02/2026 11:06 AM

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ
KARNATAKA

‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ

By kannadanewsnow0925/04/2024 1:44 PM

ಬೆಂಗಳೂರು: ಏಪ್ರಿಲ್.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ಹಾಜರಾಗೋ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ತನ್ನ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿವೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 29.04.2024 ರಿಂದ ಕರ್ನಾಟಕದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದು ಹೇಳಿದೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 29.04.2024 ರಿಂದ 16.05.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.
ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು ಎಂದಿದೆ.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದು ಹೇಳಿದೆ.

ಬಿಎಂಟಿಸಿ ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಇನ್ನೂ ಬಿಎಂಟಿಸಿ ಕೂಡ ಆದೇಶ ಹೊರಡಿಸಿದ್ದು, ಅದರಲ್ಲಿ  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 29.04.2024 ರಿಂದ 15.05.2024 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ 02 ನಡೆಯಲಿದ್ದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಕಾಲೇಜು ಹೊರತಾಗಿ ಇತರೆ ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಲಾಗಿದೆ ಎಂದಿದೆ.

ತತ್ಸಂಬಂಧ ಸಂಸ್ಥೆಯು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ತಿಳಿಸಿದೆ.

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ದಿನಾಂಕ 29.04.2024 ರಿಂದ 16.05.2024 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋಲಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಗಳನ್ನು ಕಾರ್ಯಾಚರಣೆಗೊಳಿಸುವುದು ಎಂದು ಹೇಳಿದೆ.

ಹೆಚ್ಚುವರಿ ಸುತ್ತುವಳಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋಲಿಕೆ ನಿಲುಗಡೆ ಕೋಲಿದಲ್ಲಿ, ಬಸ್ ನಿಲುಗಡೆಯನ್ನು ನೀಡಲು ಚಾಲನಾ ಸಿಬ್ಬಂದಿಗಳಿಗೆ ತಿಳಿಸುವುದು. ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸುವಂತೆ ಸೂಚಿಸಿದೆ.

ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಎಂಸಿಸಿ ಉಲ್ಲಂಘನೆ ಆರೋಪ: ಬಿಜೆಪಿ, ಕಾಂಗ್ರೆಸ್‌ನಿಂದ ಉತ್ತರ ಕೋರಿದ ಚುನಾವಣಾ ಆಯೋಗ

Share. Facebook Twitter LinkedIn WhatsApp Email

Related Posts

ಕಲಬುರ್ಗಿಯಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ 2 ಗುಂಪುಗಳ ಮಧ್ಯ ಗಲಾಟೆ : ಓರ್ವ ಮಹಿಳೆಗೆ ಗಾಯ!

07/02/2026 11:08 AM1 Min Read

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM2 Mins Read

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM2 Mins Read
Recent News

ಕಲಬುರ್ಗಿಯಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ 2 ಗುಂಪುಗಳ ಮಧ್ಯ ಗಲಾಟೆ : ಓರ್ವ ಮಹಿಳೆಗೆ ಗಾಯ!

07/02/2026 11:08 AM

ಬಾಂಗ್ಲಾದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ, 50 ಕ್ಕೂ ಹೆಚ್ಚು ಮಂದಿಗೆ ಗಾಯ

07/02/2026 11:06 AM

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM
State News
KARNATAKA

ಕಲಬುರ್ಗಿಯಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ 2 ಗುಂಪುಗಳ ಮಧ್ಯ ಗಲಾಟೆ : ಓರ್ವ ಮಹಿಳೆಗೆ ಗಾಯ!

By kannadanewsnow0507/02/2026 11:08 AM KARNATAKA 1 Min Read

ಕಲಬುರ್ಗಿ : ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಕಲ್ಬುರ್ಗಿಯಲ್ಲಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದೆ. ಪೊಲೀಸರ…

ಇನ್ಮುಂದೆ ಈ `ಆಧಾರ್ ಕಾರ್ಡ್’ಗಳು ಮಾನ್ಯವಾಗಿರಲ್ಲ : ಸಾರ್ವಜನಿಕರು ಇದನ್ನು ತಿಳಿದಿರಬೇಕು.!

07/02/2026 11:03 AM

BIG NEWS : `ಪಡಿತರ ಚೀಟಿದಾರ’ರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಫಲಾನುಭವಿಗಳ ಖಾತೆಗೆ ನೇರ ಹಣ ಜಮಾ.!

07/02/2026 10:56 AM

BIG NEWS : ಹಾವೇರಿಯಲ್ಲಿ ಒಂದೇ ದಿನ 20 ಜನರ ಮೇಲೆ ಹುಚ್ಚು ನಾಯಿ ದಾಳಿ : 1 ವರ್ಷದ ಮಗು ಸೇರಿ ಐವರಿಗೆ ಗಾಯ!

07/02/2026 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.