ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ಹಂಚಿಕೊಂಡಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 01-03-2024 ರಿಂದ 22-03-2024ರವರೆಗೆ ನಡೆಯಲಿರುವುದರಿಂದ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದೆ.