ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು 2024-25 ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪುಟಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆ ಅರ್ಜಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 25 ರೊಳಗಾಗಿ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-223328 ನ್ನು ಸಂಪರ್ಕಿಸುವುದು.
`Flipkart’ ಗ್ರಾಹಕರಿಗೆ ಬಿಗ್ ಶಾಕ್ : ವಸ್ತುಗಳ `ಆರ್ಡರ್’ ಮೇಲಿನ ಶುಲ್ಕ ಹೆಚ್ಚಳ!
BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!