ಬೆಂಗಳೂರು: 2024-25ನೇ ಸಾಲಿನಲ್ಲಿ ಐಎಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಗೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲು ಉದ್ದೇಶಿಸಲಾಗಿದೆ. ಮುಂದುವರೆದು 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರಿಕ್ಷೇಗಳ ತರಬೇತಿಗೆ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಕಲಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ನಗರದಲ್ಲ ನಿರ್ಮಿಸಿರುವ ಹಜ್ ಭವನದಲ್ಲ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
ಆದ್ದರಿಂದ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಸಲ್ಲಿಸಲು ಸೇವಾಸಿಂಧು (https:/sevasindhu.karnataka.gov.in) ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆಗಳ ಕುರಿತಾದ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ವಿಷಯದ ಮಾಹಿತಿ ಕುರಿತು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ಸೂಚಿಸಿದೆ. ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ www.dom.karnataka.gov.in ರಲ್ಲಿ “2024-25ನೇ ಸಾಲಿನ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ” (ಕ್ಲಿಕ್ ಮಾಡಿ), ಸಹಾಯವಾಣಿ ಸಂಖ್ಯೆ:8277799990 ಕರೆಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ:24.07.2024 ರಿಂದ 31.08.2024 ರವರೆಗೆ ಅಂತ ತಿಳಿಸಿದೆ.