ಶಿವಮೊಗ್ಗ : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ. ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಆರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, https://bcwd.karnataka.gov.in ವೆಬ್ಸೈಟ್ ಮೂಲಕ ಡಿ. 05 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಹಾಗೂ ಸಹಾಯವಾಣಿ ಸಂ.: 8050770004 ನ್ನು ಸಂಪರ್ಕಿಸುವುದು.