ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸ್ತಕರು ವೆಬ್ ಸೈಟ್ www.kacdc.karnataka.gov.in ನಲ್ಲಿ ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು- 560010, ಅಥವಾ ದೂರವಾಣಿ ಸಂಖ್ಯೆ: 080-23156006 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.