ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹ ಧನ ಯೋಜನೆಯಡಿ 50 ಸಾವಿರ ರೂ.ವರೆಗೆ ಪ್ರೋತ್ಸಾಹ ಧನ ನೀಡುತ್ತಿದೆ.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೈಕ್ಷಣಿಕ ಸಾಧನೆ ತೋರಿದಲ್ಲಿ, ಅವರನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ.
ಈ ಯೋಜನೆಯಡಿ ವಿವಿಧ ಹಂತಗಳ ಶಿಕ್ಷಣವನ್ನು ಪ್ರಥಮ ಪ್ರಯತ್ನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತ ಪ್ರಮಾಣದಲ್ಲಿ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ.
ಇದರ ಮುಖ್ಯ ಉದ್ದೇಶ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಉನ್ನತ ಶಿಕ್ಷಣದತ್ತ ಉತ್ತೇಜನ ನೀಡುವುದು ಹಾಗೂ ಅವರ ಶೈಕ್ಷಣಿಕ ಪ್ರಗತಿಗೆ ಬೆಂಬಲ ನೀಡುವುದಾಗಿದೆ.









