ಬೆಳಗಾವಿ ಸುವರ್ಣಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ಉತ್ತರಿಸಿದರು.
2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ. ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ.
2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ… pic.twitter.com/4Lj1SCeGXY
— DIPR Karnataka (@KarnatakaVarthe) December 10, 2025
JOB ALERT: ರಾಜ್ಯದಲ್ಲಿ ಖಾಲಿ ಇರುವ 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ: ಸಿಎಂ ಸಿದ್ಧರಾಮಯ್ಯ
ಇದು ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ: ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ!








