2024-25 ನೇ ಸಾಲಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಲ್ಯಾಪ್‍ಟಾಪ್ ಯೋಜನೆಯಡಿ ಸೌಲಭ್ಯವನ್ನು ಒದಗಿಸಲು ಸಫಾಯಿ ಕರ್ಮಚಾರಿಗಳು ಮತ್ತು ಅವರ ಅವಲಂಭಿತರು ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಬಿ.ಇ, ಎಂಬಿಬಿಎಸ್, ಎಂಕಾಂ, ಎಂಎ, ಎಂಎಸ್ಸಿ, ಎಂಟೆಕ್, ಎಂಬಿಎ ಇತ್ಯಾದಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 28, 2025 ರೊಳಗಾಗಿ ಧಾರವಾಡ ಸರಸ್ವತಪುರದ ವಿದ್ಯಾಗಿರಿ ಪೋಲಿಸ್ ಸ್ಟೇಶನ್ ಹತ್ತಿರದಲ್ಲಿರುವ ಶಿವಾ ಆರ್ಕೇಡ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂ: 0836-2447151 ಗೆ ಅಥವಾ ಜಿಲ್ಲಾ ಕಛೇರಿಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.