Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM

Good News ; ‘TCS’ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ಶೇ.80ಕ್ಕೆ ಸಂಬಳ ಹೆಚ್ಚಳ

19/02/2026 5:41 PM

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಶೈಕ್ಷಣಿಕ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಶೈಕ್ಷಣಿಕ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By kannadanewsnow5709/09/2025 6:31 AM

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ:

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದು ರೂ. 1 ಲಕ್ಷ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.

ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಮಿತಿಯೊಳಗಿರಬೇಕು.

ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಹ ಅರ್ಜಿದಾರರನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಮೀಸಲಾತಿ ಇದ್ದು, ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ http://kacdc.karnataka.gov.in ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಆರ್ಯವೈಶ್ಯ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for students in the state: Applications invited for loan facility under the 'Arivu Educational Scheme'
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM2 Mins Read

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM2 Mins Read

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM2 Mins Read
Recent News

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

19/02/2026 5:46 PM

Good News ; ‘TCS’ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ; ಶೇ.80ಕ್ಕೆ ಸಂಬಳ ಹೆಚ್ಚಳ

19/02/2026 5:41 PM

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM
State News
KARNATAKA

ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0919/02/2026 5:46 PM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ…

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

19/02/2026 5:40 PM

ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಭೂಸ್ವಾಧೀನವೇ ಪ್ರಮುಖ ಆಧಾರ

19/02/2026 5:35 PM

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾಸ್ ಶರ್ಮಾ ಆಧಾರರಹಿತ ಹೇಳಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

19/02/2026 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.