Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರಿಗೆ ಬಿಗ್ ಶಾಕ್ : ವಲಸಿಗರಿಗೆ ವರ್ಕ್ ಪರ್ಮಿಟ್ ನವೀಕರಣ ನಿಲ್ಲಿಸಿದ ಅಮೇರಿಕಾ

30/10/2025 7:35 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 200 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ

30/10/2025 7:27 AM

ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ `ಬ್ಯಾಂಕಿಂಗ್’ ನಿಯಮಗಳು | Bank Rules

30/10/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 200 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 200 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ

By kannadanewsnow5730/10/2025 7:27 AM
hostels

ಶಿವಮೊಗ್ಗ : ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ 200 ಹೊಸ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಅವರು ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಿಂದ ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ  ಶಿವಮೊಗ್ಗ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

 ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅನುದಾನದಿಂದ ನಿರ್ಮಿಸಲಾದ ಹಾಸ್ಟೆಲ್  ಕಟ್ಟಡಕ್ಕೆ ನಿಗಧಿತ ಸಂಖ್ಯೆಯ ವಿದ್ಯಾರ್ಥಿಗಳ ಕೊರತೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಅನೇಕ ವರ್ಷಗಳಿಂದ ಪಾಳುಬಿದ್ದಿದ್ದ ಕಟ್ಟಡವನ್ನು ಇತರೆ ಹಿಂದುಳಿದ ವರ್ಗಗಳ ಇಲಾಖೆಯು ನಿಯಮಾನುಸಾರ ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಅದನ್ನು ಸದುಪಯೋಗಪಡಿಸಿಕೊಳ್ಳಲಾಗುತ್ತಿದೆ. ಸದರಿ ಕಟ್ಟಡವನ್ನು ಯಾವ ಉದ್ದೇಶಕ್ಕಾಗಿ ನಿರ್ಮಿಸಲಾಗಿದೆಯೋ ಅದೇ ಉದ್ದೇಶಕ್ಕೆ ಬಿಟ್ಟುಕೊಟ್ಟು, ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

 ವಸತಿ ನಿಲಯ ಕಟ್ಟಡಗಳ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಸಾರ್ವಜನಿಕ ಬಳಕೆಯ ನಿವೇಶನಗಳು ನಗರದ ಹೊರವಲಯದಲ್ಲಿದ್ದು, ಹಾಸ್ಟೆಲ್ ನಿರ್ಮಾಣಕ್ಕಾಗಿ ಗುರುತಿಸಿದ್ದಲ್ಲಿ ಅಂತಹ ಸ್ಥಳದಲ್ಲಿ ಹಾಸ್ಟೆಲ್ನಿರ್ಮಾಣದ ನಂತರ ಅಲ್ಲಿಂದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ಒಡಾಡಲು ಅನುಕೂಲವಾಗುವಂತೆ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಅವರು ಸೂಚಿಸಿದರು.

* ಹಾಸ್ಟೆಲ್ ಪ್ರವೇಶಕ್ಕೆ ದಿನೇದಿನೇ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಹಾಸ್ಟೆಲ್ನಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವಂತೆ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ವಸತಿ ನಿಲಯಗಳಲ್ಲಿ ಇತರೆ ವಿದ್ಯಾರ್ಥಿಗಳ ಪ್ರವೇಶಕ್ಕೂ ಅವಕಾಶ ಒದಗಿಸಬೇಕು. ಸಂಬಂಧಿಸಿದ ಇಲಾಖಾಧಿಕಾರಿಗಳು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. – ಎಸ್.ಎನ್.ಚನ್ನಬಸಪ್ಪ, ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ.

* ಶೈಕ್ಷಣಿಕ ಸಾಲಿನ ಮುಕ್ತಾಯದ ಸಂದರ್ಭದಲ್ಲಿ ಹಾಸ್ಟೆಲ್ ಗಳ ನಿರ್ವಹಣಾ ಕಾರ್ಯ ಸ್ಥಗಿತಗೊಳ್ಳುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ, ಪರೀಕ್ಷಾ ಕಾಲದಲ್ಲಿ ತೀವ್ರ ತರಹದ ಅಡಚಣೆ ಉಂಟಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಈ ಲೋಪವನ್ನು  ಸರಿಪಡಿಸಬೇಕು. ಶೇ.40ರಷ್ಟು ವಿದ್ಯಾರ್ಥಿಗಳು ಶಾಲೆಗೆ ಹೋಗದಿರುವ ಹಾಗೂ ಹಾಸ್ಟೆಲ್ಸೌಲಭ್ಯ ಬಳಸಿಕೊಳ್ಳುತ್ತಿರುವ ಮಾಹಿತಿ ಇದೆ. ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿ.  – ಡಾ|| ಧನಂಜಯ ಸರ್ಜಿ, ವಿಧಾನ ಪರಿಷತ್ಸದಸ್ಯರು, ಶಿವಮೊಗ್ಗ.

* ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಊಟೋಪಹಾರದಲ್ಲಿ ಗುಣಮಟ್ಟದ ಕೊರತೆ ಇರುವ ಬಗ್ಗೆ ಆಗಾಗ್ಗೆ ದೂರುಗಳ ಕೇಳಿ ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. – ಬೇಳೂರು ಗೋಪಾಲಕೃಷ್ಣ, ಶಾಸಕರು ಹಾಗೂ  ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿ.,

* ವಾದಿ-ಎ-ಹುದಾ, ಲಷ್ಕರ್ಮೊಹಲ್ಲಾ, ಆರ್.ಎಂ.ಎಲ್. ನಗರ ಮುಂತಾದ ಅಲ್ಪಸಂಖ್ಯಾತರು ವಾಸಿಸುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಮಹಾನಗರಪಾಲಿಕೆಯ ಆಯುಕ್ತರು ಗಮನಿಸಿ,ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕು.

* -ಶ್ರೀಮತಿ ಬಲ್ಕಿಷ್  ಬಾನು, ವಿಧಾನ ಪರಿಷತ್ಸದಸ್ಯರು.

* ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸ್ಥಳೀಯ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ಗೆ ಪ್ರವೇಶಾವಕಾಶ ನೀಡಿದರೆ ಹೇಗೆ ? ಪರ ಊರುಗಳ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಿ.  _ ಶ್ರೀನಿವಾಸ್, ಶಾಸಕರು, ತರೀಕರೆ ವಿಧಾನಸಭಾ ಕ್ಷೇತ್ರ.

ವಿದ್ಯಾರ್ಥಿಗಳ ಕೊರತೆಯಿಂದ ಖಾಲಿ ಇರುವ  ಹಾಸ್ಟೆಲ್ ಕಟ್ಟಡಗಳನ್ನು ಅಗತ್ಯವಿರುವ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಹಾಸ್ಟೆಲ್ ಗಳಿಗೆ ಹಸ್ತಾಂತರಿಸುವಂತೆ ಅವರು ಸೂಚಿಸಿದರು.

 ಗಂಗಾಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಕೊಳವೆಬಾವಿಗಳಿಗೆ ಸಕಾಲದಲ್ಲಿ ವಿದ್ಯುತ್ಸಂಪರ್ಕ ಕಲ್ಪಿಸಿ. ವಿವಿಧ ನಿಗಮ-ಮಂಡಳಿಗಳ ವತಿಯಿಂದ ಹಲವು ಯೋಜನೆಗಳಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗಿದ್ದ ಸಾಲಸೌಲಭ್ಯವನ್ನು ಮರುಪಾವತಿ ಮಾಡುವಂತೆ ಪ್ರೇರೇಪಿಸಲು ನಿಗಮದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

 ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅನೇಕ ಮಹತ್ವದ ಬದಲಾವಣೆಗಳಾಗಬೇಕಾಗಿದೆ. ವಿದ್ಯಾರ್ಥಿ ನಿಲಯಗಳ ಆರಂಭಕ್ಕೂ ಹೆಚ್ಚಿನ ಬೇಡಿಕೆ ಇದೆ. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಶಿಕ್ಷಣದ ಮಹತ್ವದ ಅರಿವಾಗಿದೆ. ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಲಾಖೆ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ. ಅಧಿಕಾರಿಗಳೂ ಸಹ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದ ಅವರು, ಶಾಲಾ-ಕಾಲೇಜುಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕಾಲಕಾಲಕ್ಕೆ ವಿದ್ಯಾರ್ಥಿಗಳಿಗೆ ಸಮಾಲೋಚನೆ ನಡೆಸಬೇಕು. ಗಾಂಜಾ, ಅಫೀಮು ಬಲೆಗೆ ಬೀಳದಂತೆ ಅವರ ಭವಿಷ್ಯದ ಜೀವನ ಹಾಳಾಗದಂತೆ ಪೊಲೀಸ್ಇಲಾಖೆಯು ವಿಶೇಷ ಗಮನಹರಿಸಬೇಕು. ದುಷ್ಟ ವಿದ್ಯಾರ್ಥಿಗಳ ರಕ್ಷಣೆಯಲ್ಲಿ ಜನಪ್ರತಿನಿಧಿಗಳ ಮದ್ಯಪ್ರವೇಶ ಇರಬಾರದು ಎಂದರು.

 ಸಭೆಯಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಎಸ್.ಎನ್.ಚನ್ನಬಸಪ್ಪ, ಶ್ರೀಮತಿ ಬಲ್ಕಿಷ್  ಬಾನು, ಡಾ|| ಧನಂಜಯ ಸರ್ಜಿ, ಗುರುರಾಜ ಗಂಟಿಹೊಳಿ, ಅಬ್ದುಲ್ಜಬ್ಬಾರ್, ಎಸ್.ಕೆ.ಜಕ್ಕಪ್ಪನವರ್, ಶ್ರೀನಿವಾಸ್, ಜಿಲ್ಲಾಧಿಕಾರಿ ಗುರುದತ್ತಹೆಗಡೆ, ಸಿಇಒ ಎನ್.ಹೇಮಂತ್, ಪೊಲೀಸ್ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್  ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Good news for students in the state: Government takes steps to construct 200 hostels
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

30/10/2025 7:16 AM1 Min Read

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

30/10/2025 7:02 AM3 Mins Read

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

30/10/2025 6:49 AM1 Min Read
Recent News

ಭಾರತೀಯರಿಗೆ ಬಿಗ್ ಶಾಕ್ : ವಲಸಿಗರಿಗೆ ವರ್ಕ್ ಪರ್ಮಿಟ್ ನವೀಕರಣ ನಿಲ್ಲಿಸಿದ ಅಮೇರಿಕಾ

30/10/2025 7:35 AM

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 200 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ

30/10/2025 7:27 AM

ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ `ಬ್ಯಾಂಕಿಂಗ್’ ನಿಯಮಗಳು | Bank Rules

30/10/2025 7:19 AM

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

30/10/2025 7:16 AM
State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 200 ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸರ್ಕಾರ ಕ್ರಮ

By kannadanewsnow5730/10/2025 7:27 AM KARNATAKA 3 Mins Read

ಶಿವಮೊಗ್ಗ : ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ 200 ಹೊಸ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲು ಉದ್ದೇಶಿಸಿದ್ದು,…

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

30/10/2025 7:16 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

30/10/2025 7:02 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 984 ಸರ್ಕಾರಿ ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಆದೇಶ

30/10/2025 6:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.