ಬೆಂಗಳೂರು: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿಗೆ ಚಿಂತನೆ ನಡೆಸಲಾಗಿದೆ ಅಂಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ. ಕೇಂದ್ರ ಮರು ಪರೀಕ್ಷೆ ನಿಗದಿ ಮಾಡಿರುವುದರಿಂದ ರಾಜ್ಯ ಸರ್ಕಾರವೇ ನುರಿತ ಉಪನ್ಯಾಸಕರಿಂದ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ ಅಂತ ತಿಳಿಸಿದರು.
ಇನ್ನೂ ಇದರಿಂದ ಬಡ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ಇದೇ ವೇಳೆ ತಿಳಿಸಿದರು. ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಾಮಮಾರ್ಗದಲ್ಲಿ ಸೀಟ್ ಪಡೆಯುವುದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ ಅಂತ ಹೇಳಿದ ಅವರು ನೀಟ್ ಪರೀಕ್ಷೆಯಲ್ಲಿ ಆಗಿರುವ ಅದ್ವಾನದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ರೀತಿಯ ಗೊಂದಲಗಳಿಗೆ ತೆರೆ ಬೀಳಬೇಕಾಗಿದೆ ಅಂತ ತಿಳಿಸಿದರು. ರಾಜ್ಯದಲ್ಲಿ ಸುಮಾರು 1,900 ಅನಧಿಕೃತ ಶಾಲೆಗಳನ್ನು ಸರ್ಕಾರ ಗುರುತಿಸಿದೆ. ಕಾನೂನು ಉಲ್ಲಂಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಈಗಿರುವ ನಿರ್ಬಂಧವನ್ನು ಸಡಿಲಿಸಲು ಚರ್ಚೆ ನಡೆಸಲಾಗಿದೆ ಅಂಥ ತಿಳಿಸಿದರು.