ಬೆಂಗಳೂರು: ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರಗಳನ್ನು ಸರಬರಾಜು ಮಾಡಲಾಗಿರುತ್ತದೆ ಎಂದಿದ್ದಾರೆ.
ಇನ್ನೂ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ದೂರುಗಳು ಕೂಡ ಸ್ವೀಕೃತವಾಗಿಲ್ಲ. 2024-25ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಎಲ್ಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗಿದೆ ಅಂತ ತಿಳಿಸಿದೆ.