ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡವಲಪ್‌ಮೆಂಟ್ (APF) ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎಲ್ಲಾ ಆರು ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ,/ಬಾಳಹಣ್ಣು/ ಶೇಂಗಾ ಚಿಕ್ಕಿಯನ್ನು ವಿತರಿಸುತ್ತಿದ್ದು ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ 25-09-2024 ರಂದು ನಡೆಸುವ ಬಗ್ಗೆ ರಾಜ್ಯ ಸರ್ಕಾರವು ಸೂಚನೆ ನೀಡಿದೆ.
ರಾಜ್ಯ ಸರ್ಕಾರವು ಹಿಂದಿನ ವರ್ಷಗಳಂತೆ ಈ ವರ್ಷವೂ ಸಹ ತನ್ನ ವಾರ್ಷಿಕ ಶೇಕಡಾ 100 ರ ಆರ್ಥಿಕ ಅನುದಾನದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಪೂರ್ವಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅವರಲ್ಲಿರುವ ಅಪೌಷ್ಠಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಅವರ ಆರೋಗ್ಯಕರ ದೈಹಿಕ ಮಾನಸಿಕ ಬೆಳವಣಿಗೆಯನ್ನು ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಅವರ ಶಾಲಾ ತರಗತಿ ದಾಖಲಾತಿಯನ್ನು ಹೆಚ್ಚಳವಾಗಿಸಲು ರಾಜ್ಯದಲ್ಲಿಯೇ ವಿನೂತನವಾಗಿ ಶಾಲೆಗಳಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಬಿಸಿಹಾಲು, ಮೊಟ್ಟೆ, ಬಾಳಹಣ್ಣು / ಶೇಂಗಾ ಚಿಕ್ಕಿಯನ್ನು ವಿತರಿಸುವ ಕಾರ್ಯಕ್ರಮವನ್ನು ಮದ್ಯಾಹ್ನ ಬಿಸಿಯೂಟದೊಂದಿಗೆ ಕಳೆದ ಸಾಲಿನಿಂದ ಪೂರ್ವ ಪ್ರಾಥಮಿಕ ಶಾಲೆಗಳ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಸೇರಿದಂತೆ ಎಲ್ಲಾ 1-10 ನೇ ತರಗತಿಯ 55 ಲಕ್ಷ ವಿದ್ಯಾರ್ಥಿಗಳಿಗೆ ಉಲ್ಲೇಖ 1 doš ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ.
ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿರುವ ಶಾಲಾ ಮಕ್ಕಳ ಶೇಕಡಾ 100ರ ಅಭಿವೃದ್ಧಿ ಉದ್ದೇಶಿತ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಬೆಂಬಲಿಸಿ ಇದನ್ನು ಮತ್ತಷ್ಟು ಬಲವರ್ಧನೆಗೊಳಿಸಲು, ಸರ್ಕಾರದೊಂದಿಗೆ ಕೈಜೋಡಿಸಿ ರಾಜ್ಯದ ಪ್ರತಿಷ್ಠಿತ ಖಾಸಗಿ ಸಂಸ್ಥೆಯಾಗಿರುವ ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡೆವಲೆಪ್‌ಮೆಂಟ್ (APF) ಸಂಸ್ಥೆಯು 2024-25ನೇ ಸಾಲಿನಲ್ಲಿ ಮುಂದೆ ಬಂದಿದ್ದು, ತನ್ನ ಸಹಭಾಗಿತ್ವದಲ್ಲಿ, ರಾಜ್ಯದ ಪೂರ್ವಪ್ರಾಥಮಿಕ ಸೇರಿದಂತೆ ಸರ್ಕಾರಿ ಮತ್ತು ಅನುದಾನಿತ 1-10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಮದ್ಯಾಹ್ನ ಬಿಸಿಯೂಟದೊಂದಿಗೆ ವಾರದಲ್ಲಿ ಹೆಚ್ಚುವರಿಯಾಗಿ ನಾಲ್ಕು ದಿನಗಳು ಸೇರಿ ವಾರದ ಒಟ್ಟು ಎಲ್ಲಾ ಆರು ಶಾಲಾ ಕರ್ತವ್ಯದ ದಿನಗಳಂದು ಮುಂದಿನ ಮೂರು ವರ್ಷಗಳ ಅವಧಿಗೆ ವಿತರಿಸಲು, ಶಾಲಾ ಶಿಕ್ಷಣ ಇಲಾಖೆಯೊಂದಿಗೆ ದಿನಾಂಕ 20.07.2024ರಂದು ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ಇವರ ಸಮ್ಮುಖದಲ್ಲಿ, APF ಸಂಸ್ಥೆಯೊಂದಿಗೆ ಒಡಂಬಡಿಕೆ (Memorandum of Understanding-MoU) ಮಾಡಿಕೊಂಡಿರುತ್ತಾರೆ. ಸೆಪ್ಟೆಂಬರ್ – 2024 ರಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಪೂರ್ವ ಪ್ರಾಥಮಿಕ ಶಾಲೆಗಳು ಸೇರಿದಂತೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಟ್ಟು 55 ಲಕ್ಷ ವಿದ್ಯಾರ್ಥಿಗಳಿಗೆ, ಒಟ್ಟು ಆರ್ಥಿಕ ನೆರವಿನ ಅನುದಾನವಾಗಿ ರೂ.1591 ಕೋಟಿ ಮೊತ್ತವನ್ನು ಸಂಪೂರ್ಣವಾಗಿ ತನ್ನ APF ಫೌಂಡೇಶನ್ ಸಂಸ್ಥೆಯ ಅನುದಾನದಿಂದ ಭರಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲು ಯಾದಗಿರಿ ಜಿಲ್ಲೆಯ ಆಯ್ಕೆ ಸರ್ಕಾರಿ ಶಾಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾನ್ಯ ಶಿಕ್ಷಣ ಸಚಿವರು ಸರ್ಕಾರದ ಪ್ರತಿನಿಧಿಯಾಗಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಮಾನ್ಯ ಉಸ್ತುವಾರಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಸದರಿ ಕಾರ್ಯಕ್ರಮಕ್ಕೆ APF ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಸದರಿ ಕಾರ್ಯಕ್ರಮವನ್ನು ಏರ್ಪಡಿಸುವ ಸಂಬಂಧ ಅಗತ್ಯವಾದ ಎಲ್ಲಾ ಸಕಲ ಪೂರ್ವಸಿದ್ಧತೆಗಳನ್ನು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ, ಚರ್ಚಿಸಿ, ತಯಾರಿ ಮಾಡಿಕೊಳ್ಳುವಂತೆ ಯಾದಗಿರಿ ಜಿಲ್ಲೆಯ ಅನುಷ್ಠಾನಾಧಿಕಾರಿಗಳಿಗೆ ಮತ್ತು ಇಲಾಖೆಯ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದೆ.
ಅದೇ ದಿನದಂದು ಅಂದರೆ, ದಿನಾಂಕ, 25.09.2024 ರಂದು ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಎಲ್ಲಾ ತಾಲ್ಲೂಕುಗಳ ಮಾನ್ಯ ಶಾಸಕರನ್ನು ಕಾರ್ಯಕ್ರಮಕ್ಕ ಆಹ್ವಾನಿಸಿ ಆಯಾ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಯಾವುದಾದರೂ ಒಂದು ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮವನ್ನು ಶಿಷ್ಟಾಚಾರ ಪಾಲಿಸಿ ಚಾಲನೆಗೊಳಿಸುವುದು. ಈ ಸಂಬಂಧ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತದೊಂದಿಗೆ, ತಾಲ್ಲೂಕುಗಳಲ್ಲಿ ತಾಲ್ಲೂಕು ಪಂಚಾಯತಿಯೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಎಲ್ಲಾ ಗೌರವಾನ್ವಿತ ಪ್ರಜಾಪತಿನಿಧಿಗಳನ್ನು ಆಹ್ವಾನಿಸಿ ಅಗತ್ಯ ಸಿದ್ಧತೆಯೊಂದಿಗೆ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸುವುದು. ಈ ಕಾರ್ಯಕ್ರಮಗಳಲ್ಲಿ ಅಜೀಂ ಪ್ರೇಮಜಿ ಫೌಂಡೇಷನ್ ರಾಜ್ಯ/ ವಿಭಾಗ/ ಜಿಲ್ಲಾ ಮಟ್ಟದ ಸಂಯೋಜಕರು, ಫೌಂಡೇಷನ್ ಕಾರ್ಯ ನಿರ್ವಹಿಸುತ್ತಿರುವ 13 ಜಿಲ್ಲೆಗಳಲ್ಲಿ ಭಾಗವಹಿಸುತ್ತಿದ್ದು, ಇದು ಸಂಸ್ಥೆಯ ಸಹಭಾಗಿತ್ವದ ಕಾರ್ಯಕ್ರಮವಾದ ಕಾರಣ ಇವರ ಸಮನ್ವಯತೆಯನ್ನು ಕೂಡ ಸಾಧಿಸಿಕೊಳ್ಳುವುದು.
ಈ ಸಂಬಂಧ ಕಾರ್ಯಕ್ರಮ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಮಾಡಿಕೊಂಡು ವ್ಯಾಪಕವಾದ ಪೂರ್ವಭಾವಿ ಪ್ರಚಾರದೊಂದಿಗೆ ಹಾಗೂ ಅಗತ್ಯ ಸಿದ್ಧತೆಯೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚಿಸಿದೆ.