ಕೆಎನ್ಎನ್ಡಿಜಿಟಲ್ ಡೆಸ್ಕ್ : ಯಾದಗಿರಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ (NMC) ಅನುಮತಿ ದೊರೆತಿದ್ದು, ಇದೇ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳಿಗೆ ಪ್ರವೇಶಾತಿ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಪರ್ವಕ್ಕೆ ಹೊಸ ಮುನ್ನುಡಿ!
ಯಾದಗಿರಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ (NMC) ಅನುಮತಿ ದೊರೆತಿದ್ದು ಇದೇ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳಿಗೆ ಪ್ರವೇಶಾತಿ ಪ್ರಾರಂಭವಾಗಲಿದೆ.
1/2 pic.twitter.com/GaKaX0skqm
— Dr Sudhakar K (@mla_sudhakar) July 28, 2022
ಟ್ವೀಟ್ ಮೂಲಕ ವಿಷ್ಯ ತಿಳಿಸಿದ ಸಚಿವರು, “ಯಾದಗಿರಿ ಮೆಡಿಕಲ್ ಕಾಲೇಜು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದ್ದು, ಈ ಭಾಗದ ಆರೋಗ್ಯ ಮೂಲಸೌಕರ್ಯದಲ್ಲಿ ಗಣನೀಯ ಸುಧಾರಣೆ ತರಲಿದೆ” ಎಂದು ಹೇಳಿದ್ದಾರೆ. ಇನ್ನು ಯಾದಗಿರಿ ಜನತೆಯ ಬಹುದಿನಗಳ ಕನಸು ನನಸಾಗಿಸಲು ಕಾರಣೀಭೂತರಾದ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿಯವರಿಗೆ ಯಾದಗಿರಿ ಜನತೆಯ ಪರವಾಗಿ ಧನ್ಯವಾದಗಳು ಎಂದಿದ್ದಾರೆ.
ಇನ್ನು ಮತ್ತೊಂದು ಟ್ವಿಟ್ನಲ್ಲಿ “ಹಾವೇರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ” ಎಂದು ಸಚಿವರು ತಿಳಿಸಿದ್ದಾರೆ.
ಹಾವೇರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ.
1/3 pic.twitter.com/d2yu5bfwEV
— Dr Sudhakar K (@mla_sudhakar) July 28, 2022