Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Arivu scheme
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Arivu scheme

By kannadanewsnow57

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸಿಇಟಿ ಅಥವಾ ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು.

ಆಸಕ್ತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಹಾಗೂ ಫೋಷಕರ ಭಾವಚಿತ್ರಗಳು, ಸಿಇಟಿ ಮತ್ತು ನೀಟ್ ಪರೀಕ್ಷೆಯ ಎಲ್ಲಾ ಪ್ರತಿಗಳು ಮತ್ತು ಹಾಲ್ ಟಿಕೆಟ್ ಹಾಗೂ ನೋಟರಿಯಿಂದ ದೃಢೀಕರಿಸಲ್ಪಟ್ಟ ಇಂಡೆಮ್ನಿಟಿ ಬಾಂಡ್ ಅನ್ನು ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕವನ್ನು ನಿಗಮದ ವತಿಯಿಂದ ನೇರವಾಗಿ ಸಂಬಂಧಪಟ್ಟ ಕಾಲೇಜುಗಳಿಗೆ ಪಾವತಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ 2026ರ ಮೇ 30ರ ಒಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ: 08194-226412, 8431669372, 8277944213 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for students of the state: Applications invited for loan facility under Arivu scheme | Arivu scheme
Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.