ಬೆಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ ಕಾರ್ಯಕ್ರಮದ” ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15, 2025ರ ವರಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಫೆಬ್ರವರಿ 15, 2025 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು.
ಇಲಾಖೆಯ ದೂರವಾಣಿ ಸಂಖ್ಯೆ : 8050770005 /080-22867628 ಇ-ಮೇಲ್ bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ಇ-ಮೇಲ್ postmetrichelpadesk@karnataka.gov.in ಅಥವಾ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಗೆ ಸಂರ್ಪಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.