ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ ವರದಿಗಳ ಪ್ರಕಾರ ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151/- ಗಳ ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಚುನಾವಣೆಯ ವೇಳಾಪಟ್ಟಿ
ದಾವಣಗೆರೆ ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು. ಉಮೇದುವಾರರ ಪಟ್ಟಿ ಘೋಷಣೆ. ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ. ಚುನಾವಣೆ ಅಗತ್ಯವಿದ್ದಲ್ಲಿ ಮತಪತ್ರಗಳ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಗುವುದು. ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಲಿಕೆಯ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ
BREAKING ; ಡಿಸೆಂಬರ್ 13, 14 ರಂದು ಲೋಕಸಭೆಯಲ್ಲಿ ‘ಸಂವಿಧಾನ’ ಮೇಲಿನ ಚರ್ಚೆ, ಸರ್ವಪಕ್ಷಗಳು ಭಾಗಿ