ಬೆಂಗಳೂರು: ಜ.17ರಂದು ನಗರದಲ್ಲಿ ನಡೆಯುವ ಟಿ-20 ಕ್ರಿಕೆಟ್ ಪಂದ್ಯಾವಳಿಯ ಪ್ರಯುಕ್ತ ದಿನಾಂಕ 17.01.2024 ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಟಿ20 ಕ್ರಿಕೆಟ್ ಪ್ರಿಯರಿಗೆ ಮೆಟ್ರೋ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 17-01-2024ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ, ಬಿ.ಎಂ.ಆರ್.ಸಿ.ಎಲ್ ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆಯವರೆಗೆ ವಿಸ್ತರಿಸಲಿದೆ ಎಂದು ತಿಳಿಸಿದೆ.
ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ದಿನಾಂಕ 17ನೇ ಜನವರಿ 2024 ಬುಧವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಈ ಕಾಗದದ ಟಿಕೆಟ್‌ಗಳು ರಾತ್ರಿ 8.00 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತೃತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದೆ.
ರೂ. 50/-ರ ಪೇಪರ್ ಟಿಕೆಟ್ ಜೊತೆಗೆ, ಸಾಮಾನ್ಯ ದರದಲ್ಲಿ ಶೇ5% ರಿಯಾಯಿತಿಯೊಂದಿಗೆ ಕ್ಯೂ.ಆರ್ ಕೋಡ್ ಟಿಕೆಟ್‌ಗಳು, ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನೂಕೂಲಕರ ಪ್ರಯಾಣಕ್ಕಾಗಿ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ WattsApp/ Namma Metro App/ Pay TM ನಲ್ಲಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಎಂದಿನಂತೆ ಬಳಸಬಹುದು ಎಂದಿದೆ.
ವಿಸ್ತೃತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ ಎಂದು ಹೇಳಿದೆ.
ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ.
BREAKING: ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ‘ಕೆ.ಜೆ. ಜಾಯ್’ ಇನ್ನಿಲ್ಲ | K J Joy No More
BIG NEWS: ರಾಜ್ಯದಲ್ಲಿ ‘ಸಂಕ್ರಾಂತಿ ಹಬ್ಬ’ದ ದಿನವೇ ‘ಸರಣಿ ದುರಂತ’: ಒಂದೇ ದಿನ ಅಪಘಾತಕ್ಕೆ ’11 ಮಂದಿ’ ಬಲಿ